ತಾಜುಶ್ಶರೀಅಃ ಶೈಖುನಾ ಅಲೀ ಕುಂಞಿ ಮುಸ್ಲಿಯಾರ್ ಶಿರಿಯ

ಪವಿತ್ರ ಪಂಡಿತ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ. ನಡೆನುಡಿಗಳಲ್ಲಿ, ವೇಷಭೂಷಣದಲ್ಲೆಲ್ಲ ಹಳೇಕಾಲದ ಸಾತ್ವಿಕ ಪರಂಪರೆಯ ಪ್ರತೀಕದಂತಿದ್ದ ಮಹಾವಿದ್ವಾಂಸ ತಾಜುಶ್ಶರೀಅಃ ಶೈಖುನಾ ಅಲೀ ಕುಂಞಿ ಮುಸ್ಲಿಯಾರ್ ಶಿರಿಯ ಅಲ್ಲಾಹನ ವಿಧಿಗೆ ಓಗೊಟ್ಟಿದ್ದಾರೆ. ದಕ್ಷಿಣ ಭಾರತದ ಅತ್ಯುನ್ನತ ಉಲಮಾ ಒಕ್ಕೂಟವಾದ ’ಸಮಸ್ತ’ದ ಅತ್ಯಂತ ಹಿರಿಯ ಸದಸ್ಯರಾಗಿರುವ, ಪ್ರಸ್ತುತ ಅದರ ಉಪಾಧ್ಯಕ್ಷರೂ, ಜಾಮಿಅ ಸಅದಿಯ್ಯಾ ವಿದ್ಯಾಸಂಸ್ಥೆಯ ಉಪಾಧ್ಯಕ್ಷರೂ ಕೆಲವು ಮೊಹಲ್ಲಾಗಳ ಖಾಝಿಗಳೂ ಆಗಿರುವ ತಾಜುಶ್ಶರೀಅಃ ತಮ್ಮ 87ನೇ ವರ್ಷದಲ್ಲಿ ಕೊನೆಯುಸಿರೆಳೆದರು. ಕೆಲವು ದಿನಗಳಿಂದ ಅವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಗಡಿನಾಡು ಕಾಸರಗೋಡಿನ […]